ಕಾಸರಗೋಡು: ಬಂದಡ್ಕದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಂದಡ್ಕ ಗ್ರಾಮೀಣ ಬ್ಯಾಂಕ್ ಕ್ಯಾಂಟೀನ್ ನಡೆಸುತ್ತಿರುವ ಬೇತಲಂ ಉಂದತ್ತಡ್ಕ ನಿವಾಸಿ ಸವಿತಾ ಎಂಬವರ ಪುತ್ರಿ ದೇವಿಕಾ(16)ಸಾವನ್ನಪ್ಪಿದ ಬಾಲಕಿ.
ದೇವಿಕಾ ಕುಂಡಂಗುಳಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ದೇವಿಕಾ ಮೃತದೇಹ ಮಂಗಳವಾರ ಬೆಳಗ್ಗೆ ಮನೆ ಕೊಠಡಿಯೊಳಗೆ ನೇಣು ಬಿಗಿದ ಸಥಿತಿಯಲ್ಲಿ ಪತ್ತೆಯಾಗಿತ್ತು. ಸಾವಿನ ಕಾರಣ ತಿಳಿದುಬಂದಿಲ್ಲ. ಬೇಡಡ್ಕ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ದೇವಿಕಾ ಬಾಲಸಂಘದ ಸಕ್ರಿಯ ಕಾರ್ಯಕರ್ತೆಯಾಘಿದ್ದಳೆನ್ನಲಾಗಿದೆ.





