ಕಾಸರಗೋಡು: ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಕಚೇರಿಯಲ್ಲಿ ಓಣಂ ಆಚರಣೆಯನ್ನು ಆಯೋಜಿಸಲಾಯಿತು. ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಉದ್ಘಾಟಿಸಿದರು. ಉತ್ತರ ವಲಯ ಅಧ್ಯಕ್ಷ, ವಕೀಲ ಕೆ. ಶ್ರೀಕಾಂತ್, ಮಾಜಿ ಜಿಲ್ಲಾ ಸಮಿತಿ ಅಧ್ಯಕ್ಷ ರವೀಶ ತಂತ್ರಿ ಕುಂಟಾರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್.ಸುನೀಲ್, ಎನ್.ಬಾಬುರಾಜ್, ಮನುಲಾಲ್ ಮೇಲತ್, ರಾಷ್ಟ್ರೀಯ ಪರಿಷತ್ ಸದಸ್ಯ ಎಂ.ಸಂಜೀವ ಶೆಟ್ಟಿ, ಹಿರಿಯ ಮುಖಂಡರಾದ ಸವಿತಾ ಟೀಚರ್, ವಿ.ರವೀಂದ್ರನ್, ರಾಮಪ್ಪ ಮಂಜೇಶ್ವರ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭ ಕಾರ್ಯಕರ್ತರಿಗಾಗಿ ವಿವಿಧ ಸ್ಪರ್ಧೆಗಳು ನಡೆಯಿತು. ಈ ಸಂದರ್ಭ ಓಣಂ ಔತಣಕೂಟ ಆಯೋಜಿಸಲಾಗಿತ್ತು.


