ಮಂಜೇಶ್ವರ: ಕೊಡ್ಲಮೊಗರು ಶ್ರೀ ವಾಣಿವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕ್ರೀಡೋತ್ಸವ ಇತ್ತೀಚೆಗೆ ನಡೆಯಿತು. ಬ್ಯಾಂಡ್ ವಾದ್ಯಗಳೊಂದಿಗೆ ಅತಿಥಿಗಳನ್ನು ವೇದಿಕೆಗೆ ಕರೆತರಲಾಯಿತು. ನಿವೃತ್ತ ದೈಹಿಕ ಶಿಕ್ಷಕ ಬಿ.ಸಿ ಚಂದ್ರಶೇಖರ್ ರೈ ಉದ್ಘಾಟಿಸಿದರು. ಪಿ.ಟಿ.ಎ. ಅಧ್ಯಕ್ಷ ಅಬ್ದುಲ್ ಮಜೀದ್ ಶುಭ ಹಾರೈಸಿದರು. ವಿದ್ಯಾರ್ಥಿಗಳು ಕ್ರೀಡಾಜ್ಯೋತಿಯನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಭೆಯಲ್ಲಿ ಬಾಕ್ರಬೈಲ್ ಎಯುಪಿ ಶಾಲೆಯ ಪಿಟಿಎ ಅಧ್ಯಕ್ಷ ಮೊಹಮ್ಮದ್ ಆಲಿ, ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಪತಿ ರಾವ್, ದೈಹಿಕ ಶಿಕ್ಷಕ ಉದಯ್, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಪ್ರಾಂಶುಪಾಲ ವಿಜಯ್ ಕುಮಾರ್ ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ಬಿ. ವಂದಿಸಿದರು. ವನಿತಾ ನಿರೂಪಿಸಿದರು.




.jpg)
.jpg)
