ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಜರಗಿತು. ಶ್ರೀಕೃಷ್ಣ ರಾಧಾ ಗೋಪಿಕೆಯರ ವೇಷಧಾರಿಗಳೊಂದಿಗೆ ಮೆರವಣಿಗೆಯ ಮೂಲಕ ಶಾಲಾ ವೇದಿಕೆಗೆ ಅತಿಥಿ ಗಣ್ಯರನ್ನು ಸ್ವಾಗತಿಸುತ್ತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಚಿನ್ಮಯ ಮಿಷನಿನ ಮುಖ್ಯಸ್ಥ ಸ್ವಾಮಿ ವಿವಿಕ್ತಾನಂದ ಸರಸ್ವತಿಯ ಅವರು ಭಗವದ್ಗೀತೆಯ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
2024-2025 ಶೈಕ್ಷಣಿಕ ವರ್ಷದ ಹತ್ತನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮುಖ್ಯೋಪಾಧ್ಯಾಯನಿ ಮಾನಸ ಹಾಗೂ ಕಾಸರಗೋಡು ಚಿನ್ಮಯ ವಿದ್ಯಾಲಯದ ಆಡಳಿತ ಅಧಿಕಾರಿ ಕಾರ್ತಿಕ್ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರಗಿತು. ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳ ಹೆತ್ತವರು ಭಾಗವಹಿಸಿದರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.




.jpg)
