ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿಜ್ಞಾನೋತ್ಸವದ ಭಾಗವಾಗಿ ಸಮಾಜ ವಿಜ್ಞಾನ ಸಂಘದ ನೇತೃತ್ವದಲ್ಲಿ ನಡೆಸಿದ ಹೈ ಸ್ಕೂಲ್ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೊಡ್ಲಮೊಗರು ಶ್ರೀವಾಣಿವಿಜಯ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿಯ ಸೃಜನ್ ಯಂ.ಬಿ. ಪ್ರಥಮ ಸ್ಥಾನ ಪಡೆದು ಕಾಸರಗೋಡು ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಈತನ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ, ಶಿಕ್ಷಕೇತರ ವೃಂದ ಅಭಿನಂದಿಸಿದೆ.




SHRUJAN.jpg)
