ಬದಿಯಡ್ಕ: 2026 ಏಪ್ರಿಲ್ ತಿಂಗಳಿನಲ್ಲಿ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜರಗಲಿದ್ದು ಪೂರ್ವಭಾವಿಯಾಗಿ ಪದಾಧಿಕಾರಿಗಳು ಗೋಕರ್ಣದ ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಜಗದ್ಗುರು ಶಂಕರಾಚಾರ್ಯ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರನ್ನು ಭೇಟಿಯಾಗಿ ಆಶೀರ್ವಾದ ಮಂತ್ರಾಕ್ಷತೆಯನ್ನು ಪಡೆದುಕೊಂಡರು.
ಬ್ರಹ್ಮಕಲಶೋತ್ಸವಕ್ಕೆ ಶ್ರೀಗಳನ್ನು ಬರಮಾಡಿಕೊಳ್ಳಬೇಕೆನ್ನುವ ಅಪೇಕ್ಷೆಯನ್ನು ಪದಾಧಿಕಾರಿಗಳು ವ್ಯಕ್ತಪಡಿಸಿದರು. ಟ್ರಸ್ಟಿ ಸೀತಾರಾಮ ನವಕಾನ, ಮಾಜಿ ಆಡಳಿತ ಮೊಕ್ತೇಸರ ಟಿ.ಕೆ.ನಾರಾಯಣ ಭಟ್ ಪಂಜಿತ್ತಡ್ಕ, ಯುವ ವಿಭಾಗದ ಅಧ್ಯಕ್ಷ ಡಾ. ಶ್ರೀಶಕುಮಾರ ಪಂಜಿತ್ತಡ್ಕ, ಹರಿಪ್ರಸಾದ ಪೆರ್ಮುಖ ಶ್ರೀಗಳಿಂದ ಮಂತ್ರಾಕ್ಷತೆಯನ್ನು ಪಡೆದುಕೊಂಡರು.





