ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಶಾಲಾ ವಿಜ್ಞಾನ ಮೇಳದ ಲಾಂಛನ ಬಿಡುಗಡೆ ಸಮಾರಂಭ ಕೊಡ್ಲಮೊಗರು ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು. ಅಕ್ಟೋಬರ್ 13 ಹಾಗೂ 14ರಂದು ನಡೆಯುವ ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿಜ್ಞಾನ ಮೇಳಕ್ಕೆ ಶಾಲಾ ವಿದ್ಯಾರ್ಥಿ ಸೃಜನ್.ಬಿ ಅವರು ಲಾಂಛನ ತಯಾರಿಸಿದ್ದು, ಉಪಜಿಲ್ಲಾ ಶಿಕ್ಷಣಾಧಿಕಾರಿ ಜಾರ್ಜ್ ಕ್ರಾಸ್ತಾ ಅವರು ಬಿಡುಗಡೆಗೊಳಿಸಿದರು.
ವೇದಿಕೆಯಲ್ಲಿ ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಪ್ರಾಂಶುಪಾಲ ವಿಜಯಕುಮಾರ್, ಮುಖ್ಯ ಶಿಕ್ಷಕಿ ಕೃಷ್ಣವೇಣಿ, ಪಿ.ಟಿ.ಎ ಅಧ್ಯಕ್ಷ ಅಬ್ದುಲ್ ಮಜೀದ್, ಶ್ರೀ ವಾಣಿ ವಿಜಯ ಎಯುಪಿ ಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್, ಸೈಂಟ್ ಜೋಸೆಫ್ ಕಳಿಯೂರು ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾವತಿ, ನಿವೃತ್ತ ಶಿಕ್ಷಕ ಶ್ರೀಪತಿ ರಾವ್, ಚಂದ್ರಶೇಖರ್ ರೈ, ಪಿಟಿಎ ಸದಸ್ಯರು, ವಿವಿಧ ಸಮಿತಿಗಳ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಆಶಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸ್ಮಿತಾ ವಂದಿಸಿದರು.





