HEALTH TIPS

ಬುಡಕಟ್ಟು ಸಮುದಾಯದ 10 ಮಂದಿ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣ

 ರಾಯ್ಪುರ: ಛತ್ತೀಸಗಢದ ಬುಡಕಟ್ಟು ಸಮುದಾಯದ 10 ಜನರು ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‌ಎಸ್‌ಸಿ) ರಾಜ್ಯ ಪೊಲೀಸ್‌ ಕಾನ್‌ಸ್ಟೆಬಲ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಯುವಕರು ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಇಂಡೊ-ಟಿಬೆಟಿಯನ್‌ ಗಡಿ ಪೊಲೀಸ್‌ (ಐಟಿಬಿಪಿ) ಬೆಟಾಲಿಯನ್‌ ಪಡೆಗಳಿಂದ ಎರಡು ವರ್ಷ ತರಬೇತಿ ಪಡೆದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ನಕ್ಸಲ್‌ ಪೀಡಿತ ಮೋಹ್ಲ- ಮಾನ್ಪುರ- ಅಂಬಾಗಢ ಚೌಕಿ ಜಿಲ್ಲೆಯ ಅಭ್ಯರ್ಥಿಗಳು ಈ ಸಾಧನೆ ಮಾಡಿದ್ದಾರೆ. 23-25 ವರ್ಷದೊಳಗಿನ ವಿದ್ಯಾರ್ಥಿಗಳು ಇತ್ತೀಚೆಗೆ ರಾಜ್ಯ ಪೊಲೀಸ್‌ ಕಾನ್‌ಸ್ಟೆಬಲ್‌ ನೇಮಕಾತಿಗಾಗಿ ಎಸ್‌ಎಸ್‌ಸಿ ನಡೆಸಿದ ದೈಹಿಕ ಮತ್ತು ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅಂತಿಮ ಅರ್ಹತಾ ಪಟ್ಟಿಗಾಗಿ ಕಾಯುತ್ತಿದ್ದೇವೆ' ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries