ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ದಿನಾಂಕ ಘೋಷಿಸಿದರು.
243 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ರಾಜ್ಯದಲ್ಲಿ 7.43 ಕೋಟಿ ಮತದಾರರಿದ್ದಾರೆ. ಈ ಪೈಕಿ 3.29 ಕೋಟಿ ಪುರುಷ ಮತದಾರರಿದ್ದರೆ, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಮೊದಲ ಬಾರಿಗೆ 14 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದರೇ ನ.11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ನಡೆಯಲಿದೆ.

