ಬದಿಯಡ್ಕ: ವಿದುಷಿ ರೂಪಾ ವಿಘ್ನೇಶ್ ಕುಳಾಯಿ ಇವರ ಭರತನಾಟ್ಯ ರಂಗಪ್ರವೇಶ ಶ್ರೀ ಎಡನೀರು ಮಠದಲ್ಲಿ ಅ. 2 ರಂದು ಸಂಜೆ 5ಕ್ಕೆ ಜರಗಲಿರುವುದು. ಪುತ್ತೂರು ವೈಷ್ಣವೀ ನಾಟ್ಯಾಲಯದ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಇವರ ಶಿಷ್ಯೆಯಾಗಿದ್ದಾರೆ. ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ದೀಪ ಬೆಳಗಿಸಿ ಆಶೀರ್ವಚನ ನೀಡಲಿದ್ದಾರೆ. ವಿಶ್ವಕಲಾನಿಕೇತನ ಇನ್ಸಿಟ್ಯೂಟ್ ಆಫ್ ಆರ್ಟ್-ಕಲ್ಚರ್ ಪುತ್ತೂರು ಇದರ ನಿರ್ದೇಶಕ ಕರ್ನಾಟಕ ಕಲಾಶ್ರೀ ವಿದುಷಿ ನಯನಾ ವಿ.ರೈ, ಮಠದ ಪ್ರಬಂಧಕ ರಾಜೇಂದ್ರ ಕಲ್ಲೂರಾಯ, ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ, ಅತಿಥಿಗಳಾಗಿ ಪಾಲ್ಗೊಳ್ಳಲಿರುವರು.




-VID.%20Roopa.jpg)
