ಬದಿಯಡ್ಕ: ಚತುರ್ಭಾಷಾ ವಿದ್ವಾಂಸ, ತುಳು ಲಿಪಿ ಬ್ರಹ್ಮ ದಿ.ಪುಂಡೂರು ವೆಂಕಟರಾಜ ಪುಣಿಚಿತ್ತಾಯ(ಪು.ವೆಂಪು) ಅವರ ಸಂಸ್ಮರಣೆ-ಪ್ರಶಸ್ತಿ ಪ್ರದಾನ ಸಮಾರಂಭ ಅ.15 ರಂದು ಹೊಸಂಗಡಿ ದುರ್ಗಿಪಳ್ಳದಲ್ಲಿರುವ ಕೇರಳ ತುಳು ಅಕಾಡೆಮಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಆಮಂತ್ರಣ ಪತ್ರಿಕೆಯನ್ನು ಗುರುವಾರ ಎಡನೀರು ಶ್ರೀಮಠದಲ್ಲಿ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಬಿಡುಗಡೆಗೊಳಿಸಿ ಶುಭಹಾರೈಸಿದರು.
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಪುವೆಂಪು ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿಜಯರಾಜ ಪುಣಿಚಿತ್ತಾಯ ಪುಂಡೂರು, ಕಾಸರಗೋಡು ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯ್ಕ್, ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ, ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ಶ್ರೀನಾಥ್ ಈ ಸಂದರ್ಭ ಉಪಸ್ಥಿತರಿದ್ದರು.
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಪುವೆಂಪು ಪ್ರತಿಷ್ಠಾನ ಕಾಸರಗೋಡು, ಕೇರಳ ತುಳು ಅಕಾಡೆಮಿ ಮಂಜೇಶ್ವರ ಸಂಯುಕ್ತವಾಗಿ ಕಾರ್ಯಕ್ರಮ ಆಯೋಜಿಸಿದ್ದು, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಎಡನೀರು ಮಠಾಧೀಶರು ಆಶೀರ್ವಚನ ನೀಡಲಿರುವರು. ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಬಸ್ವರಾಜ ಎಸ್.ಹೊರಟ್ಟಿ ಉದ್ಘಾಟಿಸುವರು. ಈ ಸಂದರ್ಭ ಹಿರಿಯ ಸಾಹಿತಿ, ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ ಪುವೆಂಪು ಪ್ರಶಸ್ತಿ 2025ನ್ನು ಪ್ರದಾನಗೈಯ್ಯಲಾಗುವುದು. ವಿವಿಧ ವಲಯಗಳ ಗಣ್ಯರು ಉಪಸ್ಥಿತರಿರುವರು. ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು, ಪುವೆಂಪು ಚತುರ್ಭಾಷಾ ಕಾವ್ಯ ಸಂವಾದ ನಡೆಯಲಿದೆ.




.jpg)
.jpg)
