ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನೂಲ್‌ನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಉಲ್ಲಿಂದಕೊಂಡ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.
ಇಂದು ಮುಂಜಾನೆ 3.30ರ ಸುಮಾರಿಗೆ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಬಸ್‌ನಲ್ಲಿದ್ದ 12 ಮಂದಿ ತುರ್ತು ನಿರ್ಗಮನ ದ್ವಾರ ಮುರಿದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಬಸ್‌ನಲ್ಲಿ ಚಾಲಕ ಸೇರಿದಂತೆ 41 ಮಂದಿ ಪ್ರಯಾಣಿಸುತ್ತಿದ್ದರು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ವರದಿ ಪ್ರಕಾರ ಬೈಕ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಸ್ಸಿನ ಬಾಗಿಲು ಮುಚ್ಚಿಹೋಗಿತ್ತು. ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.




