ಮತದಾರರ ಪಟ್ಟಿಯ ನವೀಕರಣ, ಹೊಸ ಮತದಾರರ ಸೇರ್ಪಡೆ ಹಾಗೂ ದಾಖಲೆಗಳ ಪರಿಶೀಲನೆಗೆ ಸಂಬಂಧಿಸಿದ ಕ್ರಮಗಳ ಕುರಿತು ಪ್ರಮುಖ ನಿರ್ಧಾರಗಳನ್ನು ಆಯೋಗ ಪ್ರಕಟಿಸುವ ನಿರೀಕ್ಷೆಯಿದೆ.
ಆಯೋಗದ ಮೂಲಗಳಿಂದ ಲಭಿಸಿದ ಮಾಹಿತಿಯ ಪ್ರಕಾರ, 2026ರ ವಿಧಾನಸಭಾ ಚುನಾವಣೆಗಳು ನಡೆಯಲಿರುವ 10 ರಿಂದ 15 ರಾಜ್ಯಗಳನ್ನು ಒಳಗೊಂಡಂತೆ SIR ಪ್ರಕ್ರಿಯೆಯ ಮೊದಲ ಹಂತವನ್ನು ಈ ವೇಳೆ ಘೋಷಿಸುವ ಸಾಧ್ಯತೆಯಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮುಂದಿನ ವರ್ಷ ಚುನಾವಣೆಗೆ ತೆರಳಲಿರುವ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.




