HEALTH TIPS

6 ವರ್ಷ ಬಳಿಕ ಮತ್ತೆ ಬ್ಯಾಂಕ್‌ಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ!

ನವದೆಹಲಿ: 6 ವರ್ಷಗಳ ವಿರಾಮದ ಬಳಿಕ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ಮತ್ತೆ ವಿಲೀನ ಮಾಡುವ ಪ್ರಕ್ರಿಯೆಯನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ. 

ಪ್ರಸಕ್ತ ಆರ್ಥಿಕ ವರ್ಷದಲ್ಲೇ ಕನಿಷ್ಠ 3-4 ಸಣ್ಣ ಬ್ಯಾಂಕ್‌ಗಳನ್ನು ದೊಡ್ಡ ಬ್ಯಾಂಕ್‌ಗಳ ಜತೆ ವಿಲೀನ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದಾದ ಬಳಿಕ ಹೊಸದಾಗಿ ರಚನೆಯಾದ ಬ್ಯಾಂಕ್‌ಗಳನ್ನು ವಿಲೀನ ಮಾಡುವ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಈ ಮೂಲಕ ಈ ಬ್ಯಾಂಕ್‌ಗಳನ್ನು ಸ್ಪರ್ಧಾತ್ಮಕವಾಗಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಇದರೊಂದಿಗೆ ಭಾರತದಲ್ಲಿರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ನೆರವಾಗುವ ಯೋಜನೆಗಳನ್ನು ರೂಪಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries