ಪಾಲಕ್ಕಾಡ್: ಪಾಲಕ್ಕಾಡ್ ಕನ್ನಡಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಯಲ್ಲಿ ಆಡಳಿತ ಮಂಡಳಿ ಕ್ರಮ ಕೈಗೊಂಡಿದೆ.
ಆರೋಪಿ ಶಿಕ್ಷಕಿ ಆಶಾ ಮತ್ತು ಶಾಲೆಯ ಮುಖ್ಯೋಪಾಧ್ಯಾಯಿನಿ ಲಿಸಿ ಅವರನ್ನು ಅಮಾನತುಗೊಳಿಸಲಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಪಲ್ಲಂಚತ್ತನ್ನೂರು ಮೂಲದ ಅರ್ಜುನ್, ಮೊನ್ನೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಶಾಲೆಯಿಂದ ಮನೆಗೆ ಬಂದ ತಕ್ಷಣ ತನ್ನ ಸಮವಸ್ತ್ರದಲ್ಲಿ ನೇಣು ಬಿಗಿದುಕೊಂಡಿದ್ದ.
ನಂತರ, ಅರ್ಜುನ್ ಓದುತ್ತಿರುವ ಕನ್ನಡಿ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕಿ ಆಶಾ ವಿರುದ್ಧ ಕುಟುಂಬ ಮತ್ತು ವಿದ್ಯಾರ್ಥಿಗಳು ಗಂಭೀರ ದೂರು ದಾಖಲಿಸಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ ಮಕ್ಕಳು ಕಳುಹಿಸಿದ ಸಂದೇಶದ ನಂತರ ಸೈಬರ್ ಸೆಲ್‍ಗೆ ದೂರು ನೀಡಿ ಜೈಲಿಗೆ ಕಳುಹಿಸುವುದಾಗಿ ಶಿಕ್ಷಕಿ ಆಶಾ ಬೆದರಿಕೆ ಹಾಕಿದ್ದಾರೆ ಎಂದು ಕುಟುಂಬ ಆರೋಪಿಸಿದೆ.




