ಪೆರ್ಲ: ವಿಶ್ವ ಬಾಹ್ಯಾಕಾಶ ಸಪ್ತಾಹದ ಅಂಗವಾಗಿ ಬೆಂಗಳುರು 'ಇಸ್ರೋ'ದ ಯುಆರ್‍ಎಸ್‍ಸಿಯ ಯು.ಆರ್ ರಾವ್ ಸ್ಯಾಟಿಲೈಟ್ ಸೆಂಟರ್‍ನ ವಿಜ್ಞಾನಿಗಳಾದ ರಾಧಾಕೃಷ್ಣ ಹಾಗೂ ಮುರಳೀಧರ್ ಅವರು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯ ಹತ್ತನೇ ತರಗತಿಯ ಮಕ್ಕಳೊಂದಿಗೆ ಸಂವಾದ ಹಾಗೂ ರಸಪ್ರಶ್ನೆ ಸ್ಪರ್ಧೆ ನಡೆಸಿದರು.
ಈ ಸಂದರ್ಭ 'ಇಸ್ರೋ'ದ ಕಾರ್ಯಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭ ಶಾಲೆಗೆ ಇಸ್ರೋದ ಚಾಂದ್ರಯಾನ್ ವಿಕ್ರಮ್ ಲ್ಯಾಂಡರ್ ನ ಸ್ಮರಣಿಕೆಯನ್ನು ಹಸ್ತಾಂತರಿಸಿದರು.
ಶಾಲಾ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಎನ್.ಕೇಶವಪ್ರಕಾಶ್ ಅಧ್ಯಕ್ಷತೆವಹಿಸಿದ್ದರು. ಸಮಾರಂಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಸಂದರ್ಭ ಮಕ್ಕಳಿಗೆ ಸ್ಮರಣಿಕೆ ನೀಡಲಾಯಿತು.





