HEALTH TIPS

ಗೋವಾ ಸಚಿವ ರವಿ ನಾಯಕ್‌ ನಿಧನ

ಪಣಜಿ: ಗೋವಾದ ಕೃಷಿ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ರವಿ ನಾಯಕ್‌ ಅವರು ಹೃದಯಸ್ತಂಭನದಿಂದ ಬುಧವಾರ ಮೃತಪಟ್ಟಿದ್ದಾರೆ.

ನಾಯಕ್‌ (79) ಅವರು ಹುಟ್ಟೂರು ಖಡಪಬಂಧ್‌ನಲ್ಲಿ ಹೃದಯಸ್ತಂಭನಕ್ಕೆ ಒಳಗಾಗಿದ್ದರು. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನಾಯಕ್‌ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ನಾಯಕ್‌ ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಮೃತರ ಅಂತಿಮ ವಿಧಿವಿಧಾನ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆಯಿತು.

ಎರಡು ಬಾರಿ ಗೋವಾದ ಮುಖ್ಯಮಂತ್ರಿಯಾಗಿದ್ದ ನಾಯಕ್‌ ಅವರು, ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಹಲವು ವರ್ಷಗಳಿಂದ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ, ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷದಲ್ಲಿಯೂ ಕಾರ್ಯನಿರ್ವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries