ಕಾಸರಗೋಡು: ಕಳೆದ ಐದು ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಬಗ್ಗೆ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಅವರು ಚಟ್ಟಂಚಾಲ್ ಸರ್ಕಾರಿ ಆಸ್ಪತ್ರೆಯಲ್ಲಿ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಮತ್ತು ಕೆಐಐಎಫ್‍ಬಿ ಸಹಾಯದಿಂದ ನಿರ್ಮಿಸಲಾಗುವ ಕ್ರಿಟಿಕಲ್ ಕೇರ್ ಯೂನಿಟ್, ಹೊಸ ಒಪಿ ಮತ್ತು ಐಪಿ ಬ್ಲಾಕ್‍ಗಳ ನಿರ್ಮಾಣ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದರು. 160 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಕೋರ್ಸ್ ಅನ್ನು ಪ್ರಾರಂಭಿಸುವುದರ ಜತೆಗೆ ಸರ್ಕಾರಿ ನಸಿರ್ಂಗ್ ಕಾಲೇಜು ಮತ್ತು ನವಜಾತ ಶಿಶು ಆರೈಕೆ ಘಟಕವನ್ನೂ ತೆರೆಯಲಾಗಿದೆ. ಇದರಲ್ಲಿ ನರವಿಜ್ಞಾನ,ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೊಸ ಹುದ್ದೆಗಳನ್ನು ಆರಂಭಿಸಿರುವುದು ಆರೋಗ್ಯ ಕ್ಷೇತ್ರದಲ್ಲಿ ಒಂದು ಪ್ರಮುಖ ಸಾಧನೆಯಾಗಿದೆ.
ಎಡರಂಗ ಸರ್ಕಾರದ ಅವಧಿಯಲ್ಲಿ ಪ್ರಾರಂಭವಾದ ಕ್ಯಾತ್ ಲ್ಯಾಬ್‍ನಲ್ಲಿ ಇಲ್ಲಿಯವರೆಗೆ1837 ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ ಸಂದರ್ಭ ತೆರೆಯಲಾಗಿರುವ ತಾತ್ಕಾಲಿಕ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯ ಅಧೀನದಲ್ಲಿ ಚಟುವಟಿಕೆ ನಡೆಸುವಂತೆ ಮಾಡಲಾಗಿದ್ದು, ಪ್ರಸಕ್ತ ಮೂರು ಮಹಡಿಗಳ 45,000 ಚದರ ಅಡಿ ವಿಸ್ತೀರ್ಣದ ಆಸ್ಪತ್ರೆಯಲ್ಲಿ 50 ಹಾಸಿಗೆಗಳನ್ನು ಹೊಂದಿರುವ ಕ್ರಿಟಿಕಲ್ ಕೇರ್ ಯೂನಿಟ್ ಮತ್ತು ಒಪಿಡಿ ಬ್ಲಾಕ್‍ಗಳನ್ನು ಆರಂಭಿಸಿ ಜಿಲ್ಲಾ ಆಸ್ಪತ್ರೆಯೊಂದಿಗೆ ಸಂಯೋಜಿಸಲಾಗುವುದು ಎಂದು ತಿಳಿಸಿದರು.
ಶಾಸಕ ಸಿ.ಎಚ್ ಕುಞಂಬು ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಸಕ ಎಂ ರಾಜಗೋಪಾಲನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಕೆ.ಇನ್ಬಾಪಶೇಖರ್, ಉಪಾಧ್ಯಕ್ಷ ಶಾನವಾಸ್ ಪಾದೂರು, ಕಾಸರಗೋಡು ಬ್ಲಾಕ್ ಪಂಚಾಯಿತಿ ಅಧ್ಯಕ್ಷೆ ಶೈಮಾ, ಜಿಪಂ ಸ್ಥಾಯೀ ಸಮಿತಿ ಅಧ್ಯಕ್ಷೆ ಎಸ್.ಎನ್. ಸರಿತಾ, ಚೆಮ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಫೈಜಾ ಅಬೂಬಕ್ಕರ್, ಮಾಜಿ ಶಾಸಕ ಕೆ.ಕುಞÂರಾಮನ್ ಮೊದಲಾದವರು ಉಪಸ್ಥಿತರಿದ್ದರು.


