ಕಾಸರಗೋಡು: ರಾಜ್ಯಸಭಾ ಸಂಸದ ಸಿ.ಸದಾನಂದನ್ ಮಾಸ್ಟರ್ ಅಕ್ಟೋಬರ್ 4 ರಂದು ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಬೆಳಗ್ಗೆ 10 ಗಂಟೆಗೆ ಎಡನೀರು ಮಠಕ್ಕೆ ಭೇಟಿ ನೀಡಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದುಕೊಳ್ಳುವರು.
ಬೆಳಿಗ್ಗೆ 11.00 ಗಂಟೆಗೆ ಬಿಜೆಪಿ ಜಿಲ್ಲಾ ಕಚೇರಿಗೆ ತೆರಳುವ ಅವರನ್ನು ಮುಖ್ಯ ರಸ್ತೆಯಿಂದ ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುವುದು.11.30 ಕ್ಕೆ ಪಕ್ಷದ ಜಿಲ್ಲಾ ಕೇಂದ್ರ ಡಾ.ಶ್ಯಾಮಪ್ರಸಾದ್ ಮುಖರ್ಜಿ ಮಂದಿರದ ಸಭಾಂಗಣದಲ್ಲಿ ನಡೆಯಲಿರುವ ಬಿಜೆಪಿ.ಜಿಲ್ಲಾ ಸಮಿತಿ ಸಭೆಯನ್ನು ಉದ್ಘಾಟಿಸುವರು. ಮಧ್ಯಾಹ್ನ 3ಕ್ಕೆ ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮಕ್ಕೆ ಭೇಟಿ ನೀಡಿ ವಾಪಸಾದ ನಂತರ ಸಂಜೆ 4 ರಿಂದ 5 ರವರೆಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸಂದರ್ಶಕರನ್ನು ಭೇಟಿ ಮಾಡಲಿರುವುದಾಘಿ ಪ್ರಕಟಣೆ ತಿಳಿಸಿದೆ.



