HEALTH TIPS

ಜನನ-ಮರಣ ದತ್ತಾಂಶ ಜೋಡಣೆಗೆ ಚುನಾವಣಾ ಆಯೋಗ ಸಲಹೆ

ನವದೆಹಲಿ: ಜನನ ಮತ್ತು ಮರಣ ನೋಂದಣಿಯ ದತ್ತಾಂಶವನ್ನು ಮತದಾರರ ಪಟ್ಟಿಯೊಂದಿಗೆ ಜೋಡಣೆ ಮಾಡಿದರೆ, ಮೃತಪಟ್ಟ ವ್ಯಕ್ತಿಗಳ ಹೆಸರು ಪಟ್ಟಿಯಲ್ಲಿ ಉಳಿದುಕೊಳ್ಳುವುದನ್ನು ಸಂಪೂರ್ಣವಾಗಿ ತಪ್ಪಿಸಬಹುದು ಎಂದು ಚುನಾವಣಾ ಆಯೋಗ ಹೇಳಿದೆ. 

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಹಲವು ವರ್ಷಗಳಿಂದ ಮತದಾರರ ಪಟ್ಟಿಯಲ್ಲಿ ಉಳಿದುಕೊಂಡಿದ್ದ ಮೃತಪಟ್ಟಿರುವ ವ್ಯಕ್ತಿಗಳ ಹೆಸರನ್ನು ತೆಗೆದುಹಾಕಲಾಯಿತು.

ಎಸ್‌ಐಆರ್‌ ಜತೆಗೆ ಜನನ-ಮರಣ ನೋಂದಣಿ ದತ್ತಾಂಶವನ್ನು ಚುನಾವಣಾ ವ್ಯವಸ್ಥೆಗೆ ಜೋಡಿಸಿದರೆ ಈ ಲೋಪವನ್ನು ತಪ್ಪಿಸಬಹುದು. ಈ ನಿಟ್ಟಿನಲ್ಲಿ ಬಿಹಾರದ ಎಸ್‌ಐಆರ್‌ ಭವಿಷ್ಯದಲ್ಲಿ ಉಳಿದ ರಾಜ್ಯಗಳಿಗೂ ಮಾದರಿ ಆಗಲಿದೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ.

'ಎಸ್‌ಐಆರ್‌'ಗೆ ಮೊದಲು ಬಿಹಾರದಲ್ಲಿ 7.89 ಕೋಟಿ ಮತದಾರರಿದ್ದರು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ 65 ಲಕ್ಷದಷ್ಟು ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಯಿತು. ಇದರಲ್ಲಿ 22 ಲಕ್ಷದಷ್ಟು ಮೃತ ವ್ಯಕ್ತಿಗಳ ಹೆಸರುಗಳಿದ್ದವು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries