HEALTH TIPS

ಶಬರಿಮಲೆ ಹೆಸರಲ್ಲಿ ಹಣ ಸಂಗ್ರಹ: ಬೆಂಗಳೂರಿನಲ್ಲಿ ನೆಲಸಿರುವ ಮಲಯಾಳಿ ಮೇಲೆ ಅನುಮಾನ

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ತಾಮ್ರದ ಕವಚದಲ್ಲಿನ ಚಿನ್ನದ ತೂಕ ಕಡಿಮೆಯಾದ ಪ್ರಕರಣವು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದ ತನಿಖೆಯು ಬೆಂಗಳೂರಿನಲ್ಲಿ ನೆಲಸಿರುವ ಮಲಯಾಳಿ ಉಣ್ಣಿಕೃಷ್ಣನ್ ಪೋತ್ತಿ ಎಂಬವರ ಮೇಲೆ ಅನುಮಾನ ಮೂಡುವಂತೆ ಮಾಡಿದೆ.

ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ವಿಚಕ್ಷಣ ವಿಭಾಗವು ಈ ಪ್ರಕರಣದ ತನಿಖೆ ನಡೆಸುತ್ತಿದೆ. ದ್ವಾರಪಾಲಕ ಮೂರ್ತಿಗಳ ಕವಚಗಳಿಗೆ ಚಿನ್ನದ ಲೇಪನ ಕೊಡುಗೆಯಾಗಿ ನೀಡಿರುವ ಉಣ್ಣಿ ಕೃಷ್ಣನ್ ಪೋತ್ತಿ ಅವರು ಚಿನ್ನದ ಲೇಪನದ ಹೆಸರಿನಲ್ಲಿ ವಿವಿಧ ರಾಜ್ಯಗಳಲ್ಲಿ ಭಾರಿ ಹಣ ಸಂಗ್ರಹದಲ್ಲಿ ತೊಡಗಿದ್ದಾರೆ ಎಂದು ತನಿಖಾ ತಂಡ ಶಂಕಿಸಿದೆ.

ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಪೋತ್ತಿ ಅವರೊಂದಿಗೆ ಶಾಮೀಲಾಗಿದ್ದಾರೆ ಎನ್ನಲಾಗಿದೆ. ನಿಧಿ ಸಂಗ್ರಹದ ಭಾಗವಾಗಿ 2019ರಲ್ಲಿ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಶ್ರೀ ಅಯ್ಯಪ್ಪನ್ ದೇವಸ್ಥಾನದಲ್ಲಿ ಶಬರಿಮಲೆಯ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ಕವಚಗಳ ಭಾಗಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು ಎಂದು ಹೇಳಲಾಗಿದೆ.

ಈಗ ತಿರುವನಂತಪುರದಲ್ಲಿರುವ ಪೋತ್ತಿ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ನ್ಯಾಯಾಲಯ ಮತ್ತು ಟಿಡಿಬಿ ವಿಚಕ್ಷಣ ದಳವು ಕೋರಿರುವ ಎಲ್ಲಾ ದಾಖಲೆಗಳನ್ನು ಹಾಜರುಪಡಿಸುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಿರುವನಂತಪುರದ ಪುಳಿಮಾತ್ತ್‌ ಮೂಲದ ಪೋತ್ತಿ ಅವರು ಬೆಂಗಳೂರಿನ ಶ್ರೀರಾಂಪುರ ದೇವಾಲಯದಲ್ಲಿ ಸಹಾಯಕ ಅರ್ಚಕರಾಗಿ ಕೆಲಸ ಮಾಡಿದ್ದರು. 2004ರಲ್ಲಿ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಸುಮಾರು 10 ವರ್ಷಗಳ ಹಿಂದೆ ಶಬರಿಮಲೆಯ ಕಿರಿಯ ಅರ್ಚಕರೊಬ್ಬರಿಗೆ ಸಹಾಯಕರಾಗಿ ಕೆಲಸ ಮಾಡಿದ್ದರು.

ಅಂದಿನಿಂದ ಅವರು ಶಬರಿಮಲೆ ದೇವಸ್ಥಾನಕ್ಕೆ ದೊಡ್ಡ ಮೊತ್ತದ ದೇಣಿಗೆಗಳನ್ನು ನೀಡುವ ಹಲವು ಪ್ರಮುಖ ಉದ್ಯಮಿಗಳಿಗೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ. ಪೋತ್ತಿ, ತಿರುವನಂತಪುರದಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯೂ ಆಗಿದ್ದಾರೆ.

ಶಬರಿಮಲೆ ದೇವಸ್ಥಾನಕ್ಕೆ ದೇಣಿಗೆ ನೀಡುವ ಹೆಸರಿನಲ್ಲಿ ದಕ್ಷಿಣ ಭಾರತದ ರಾಜ್ಯಗಳ ಉದ್ಯಮಿಗಳಿಂದ ಅವರು ಈಗ ಹಣ ಸಂಗ್ರಹಿಸುತ್ತಿದ್ದಾರೆ ಎಂದು ಟಿಡಿಬಿ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries