ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ನವಾನ್ನ ಕಾರ್ಯಕ್ರಮ ಜರಗಿತು. ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಧಾರ್ಮಿಕ ಕಾರ್ಯಗಳನ್ನು ನಡೆಸಿ ಶ್ರೀದೇವರಲ್ಲಿ ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ ಕುಂಬಳೆ ಸಮೀಪದ ಅನಂತಪುರ ಶ್ರೀ ಅನಂತಪದ್ಮನಾಭ ಮಹಿಳಾ ಭಜನ ಸಂಘದವರಿಂದ ಭಜನಾ ಸಂಕೀರ್ತನೆ ನಡೆಯಿತು. 30 ವರ್ಷಗಳಿಂದ ತಮ್ಮ ಕೈಚಳಕದ ಮೂಲಕ ಜನಮನ ಸೂರೆಗೊಳ್ಳುತ್ತಿರುವ ಹಿರಿಯ ಹಾರ್ಮೋನಿಯಂ ವಾದಕ ನಳಿನಾಕ್ಷ ಕಾಸರಗೋಡು ಇವರನ್ನು ಕ್ಷೇತ್ರದ ವತಿಯಿಂದ ಶಾಲು ಹೊದೆಸಿ ಗೌರವಿಸಲಾಯಿತು. ಮಧ್ಯಾಹ್ನ ಮಹಾಪೂಜೆ, ಅನ್ನದಾನದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

.jpg)
