ಮಂಗಳವಾರ ಮಧ್ಯಾಹ್ನ SATS ಏರ್‌ಪೋರ್ಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನಿಂದ ನಿರ್ವಹಿಸಲ್ಪಡುವ ಬಸ್ ಬೇ 32ರ ಬಳಿ ನಿಂತಿದ್ದಾಗ ಧಗಧಗನೆ ಹೊತ್ತಿ ಉರಿದಿದೆ.
ಬೆಂಕಿಯ ಕೆನ್ನಾಲಿಗೆ ವಿಮಾನಕ್ಕೆ ತಾಗಿದ್ದರೆ ಹೆಚ್ಚಿನ ಸಮಸ್ಯೆಯಾಗುತ್ತಿತ್ತು. ಆದರೆ ಸ್ವಲ್ಪದರಲ್ಲೇ ಸಂಭಾವ್ಯ ದುರಂತ ತಪ್ಪಿದೆ.
ಈ ಕುರಿತ ವೈರಲ್ ವೀಡಿಯೊದಲ್ಲಿ ಬಸ್ ಬೆಂಕಿಗಾಹುತಿಯಾಗುತ್ತಿರುವುದು ಕಂಡು ಬಂದಿದೆ. ಕೂಡಲೇ ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಸೇರಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಬಸ್ಸಿನ ಹೆಚ್ಚಿನ ಭಾಗ ಬೆಂಕಿಗಾಹುತಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ.

