ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, ಮುಖ್ಯ ಕಾರ್ಯದರ್ಶಿಗಳು ನವೆಂಬರ್ 3ರಂದು ನ್ಯಾಯಾಲಯದ ಮುಂದೆ ದೈಹಿಕವಾಗಿ ಹಾಜರಾಗಬೇಕು ಎಂದು ಸ್ಪಷ್ಟಪಡಿಸಿದೆ.
"ನಾವು ಅವರನ್ನು ಅಫಿಡವಿಟ್ ಸಲ್ಲಿಸುವಂತೆ ಕೇಳಿದಾಗ, ಅವರು ನಿದ್ರಿಸುತ್ತಿದ್ದಾರೆ. ನ್ಯಾಯಾಲಯದ ಆದೇಶಕ್ಕೆ ಗೌರವವಿಲ್ಲ. ಹಾಗಾದರೆ ಸರಿ, ಅವರು ನ್ಯಾಯಾಲಯಕ್ಕೆ ಬರಲಿ" ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಹೇಳಿದರು.
ಬೀದಿ ನಾಯಿ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ಹೊರತುಪಡಿಸಿ ಇತರ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ನವೆಂಬರ್ 3ರಂದು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಈ ಮೊದಲು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಮುಖ್ಯ ಕಾರ್ಯದರ್ಶಿಗಳು ಭೌತಿಕವಾಗಿ ಹಾಜರಾಗುವ ಬದಲು ಆನ್‌ಲೈನ್ ಮೂಲಕ ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

