ಕಾಸರಗೋಡು: ಜಿಲ್ಲೆಯ ವೈದ್ಯಕೀಯ ಕ್ಷೇತ್ರದ ಹಿಂದುಳಿದಿರುವಿಕೆಯನ್ನು ಪರಿಹರಿಸಬೇಕು ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಸಭೆ ಒತ್ತಾಯಿಸಿದೆ. ಅರ್ಧಕ್ಕೆ ಸ್ಥಗಿತಗೊಂಡಿರುವ ಉಕ್ಕಿನಡ್ಕದ ಸರ್ಕಾರಿ ವೈದ್ಯಕೀಯ ಕಾಲೇಜು ಕಟ್ಟಡದ ನಿರ್ಮಾಣಕಾಮಗಾರಿಯನ್ನು ತಕ್ಷಣ ಪೂರ್ತಿಗೊಳಿಸುವುದರೊಂದಿಗೆ ಮೂಲಸೌಕರ್ಯ ಒದಗಿಸಬೇಕು. ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಉಪಟಳದಿಂದ ಕೃಷಿಕರು ಹಾಗೂ ಜನಸಾಮಾನ್ಯರು ಕಂಗೆಟ್ಟಿದ್ದು, ವನ್ಯಪ್ರಾಣಿ ಆಕ್ರಮಣಕ್ಕೆ ಶಾಶ್ವತ ಪರಿಹಾರ ಕಂಡುಕೊಂಡು, ರೈತರ ಸಂಕಷ್ಟ ನಿವಾರಿಸಬೇಕುಹಾಗೂ ಶಿಥಿಲಗೊಂಡಿರುವ ಕಾಞಂಗಾಡ್-ಕಾಸರಗೋಡು ರಾಜ್ಯ ಹೆದ್ದಾರಿಯನ್ನು ತಕ್ಷಣ ದುರಸ್ತಿಗೊಳಿಸಿ ಸಂಚಾರಕ್ಕೆ ಯೋಗ್ಯಗೊಳಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸುವುದರೊಂದಿಗೆ ಬಿಜೆಪಿ ಸಂಪೂರ್ಣ ಜಿಲ್ಲಾ ಸಮಿತಿ ಸಭೆಯಲ್ಲಿ ನಿರ್ಣಯ ಮಂಡಿಸಲಾಯಿತು.

