ಕಠಕ್: ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಸ್ವಯಂ ಘೋಷಿತ ದೇವಮಾನವನನ್ನು ಒಡಿಶಾದ ಕಠಕ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.
ಇಲ್ಲಿನ ಕೆಂದುಪಟ್ನದಲ್ಲಿ ಬಾಲಕಿಯು ತನ್ನ ಮನೆಯ ಪಕ್ಕದ ಅಂಗಡಿಯೊಂದರಲ್ಲಿ ವಸ್ತುಗಳನ್ನು ಕೊಳ್ಳಲು ತೆರಳಿದ್ದಾಗ ಘಟನೆ ನಡೆದಿದೆ.
50 ವರ್ಷ ವಯಸ್ಸಿನ ಆರೋಪಿಯು ಬಾಲಕಿಯನ್ನು ಹತ್ತಿರದ ಮಠಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಂದನ್‌ಕಾನನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

