ಮುಳ್ಳೇರಿಯ: ಮಿಂಚಿಪದವು ಶ್ರೀ ಕಾವೇರಮ್ಮ ಮಹಾಲಿಂಗೇಶ್ವರ ಕ್ಷೇತ್ರದ ಕಾವೇರಿ ತೀರ್ಥೋತ್ಸವದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನು ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಜೀರ್ಣೋದ್ಧಾರ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ಮಧುಸೂಧನ ಆಯರ್ ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ಧಾರ ಬ್ರಹ್ಮಕಲಶ ಸಮಿತಿಯ ಕಾರ್ಯಾಧ್ಯಕ್ಷ ವಕೀಲ ದಾಮೋದರ, ಜೀರ್ಣೋದ್ಧಾರ ಬ್ರಹ್ಮಕಲಶ ಸಮಿತಿಯ ಗೌರವಾಧ್ಯಕ್ಷ ವಸಂತ ಪೈ ಬದಿಯಡ್ಕ, ಚಂದ್ರಹಾಸ ಮಣಿಯಾಣಿ, ಸಾಮಾಜಿಕ ಧಾರ್ಮಿಕ ಮುಂದಾಳು ನಾರಾಯಣ ರೈ ಕಟ್ಟೆ, ಶ್ರೀ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಸದಾನಂದ ಅಡ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ವಕೀಲ ಶಿವರಾಮ ಎಂ.ಎನ್., ನಿವೃತ್ತ ವಿಂಗ್ ಕಮಾಂಡರ್ ದಾಮೋದರ ಮಣಿಯಾಣಿ ಬೆಂಗಳೂರು, ಉದ್ಯಮಿ ಕೃಷ್ಣ ಕಾಮತ್, ಅಶೋಕ ಪ್ರಭು, ಲಕ್ಷ್ಮೀನಾರಾಯಣರಾವ್ ಪಡುಮಲೆ ಮಂಗಳೂರು, ಕಾರಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷ ವಕೀಲ ಕೆ.ಗೋಪಾಲಕೃಷ್ಣ, ಕಾರ್ಯದರ್ಶಿ ಜಯಕರ ಎಂ. ಮುಂತಾದವರು ಉಪಸ್ಥಿತರಿದ್ದರು. ನಾರಾಯಣ ಕೇಕಡ್ಕ ಸ್ವಾಗತಿಸಿ, ಮನೋಜ್ ಎಂ.ಸಿ.ವಂದಿಸಿದರು.

.jpg)
