ಬದಿಯಡ್ಕ: ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿಯ ನೇತೃತ್ವದಲ್ಲಿ ವಿಕಸಿತ ಭಾರತದೊಂದಿಗೆ ವಿಕಸಿತ ಕುಂಬ್ಡಾಜೆ ಎಂಬ ಸಂಕಲ್ಪವನ್ನಿಟ್ಟುಕೊಂಡು ಮುಂಬರುವ ತ್ರಿಸ್ತರ ಪಂಚಾಯಿತಿ ಚುನಾವಣೆಯ ಮುನ್ನುಡಿಯಾಗಿ ಬೃಹತ್ ಕಾರ್ಯಕರ್ತರ ಸಮಾವೇಶ ಹಾಗೂ ಜನಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮ ಇಂದು(ಅ. 19) ಬೆಳಗ್ಗೆ ಅಗಲ್ಪಾಡಿ ಜಯನಗರ ಪಾಂಚಜನ್ಯ ಸಾಂಸ್ಕøತಿಕ ಭವನದಲ್ಲಿ ನಡೆಯಲಿರುವುದು. ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿ ಅಧ್ಯಕ್ಷ ಶಶಿಧರ ತೆಕ್ಕೆಮೂಲೆ ಅಧ್ಯಕ್ಷತೆ ವಹಿಸಲಿರುವರು. ನಿಕಟಪೂರ್ವ ಕೇರಳ ರಾಜ್ಯಾಧ್ಯಕ್ಷ ಸಿ.ಕೆ.ಪದ್ಮನಾಭನ್, ಬಿಜೆಪಿ ಮಂಗಳೂರು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕಾಸರಗೋಡು ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್., ದೇಶೀಯ ಸಮಿತಿ ಸದಸ್ಯ ಎಂ.ಸಂಜೀವ ಶೆಟ್ಟಿ ಮೊಟ್ಟೆಕುಂಜ, ಬದಿಯಡ್ಕ ಮಂಡಲಾóಧ್ಯಕ್ಷ ಗೋಪಾಲಕೃಷ್ಣ ಮುಂಡೋಳುಮೂಲೆ, ರಾಜ್ಯ ಸಮಿತಿ ಸದಸ್ಯ ರವೀಶ ತಂತ್ರಿ ಕುಂಟಾರು, ಕೋಝಿಕ್ಕೋಡು ವಲಯ ಪ್ರಧಾನ ಕಾರ್ಯದರ್ಶಿ ಸುಧಾ ಗೋಸಾಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಪಿ.ಆರ್., ಬದಿಯಡ್ಕ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ರೈ ಗೋಸಾಡ, ಶ್ರೀಧರ ಬೆಳ್ಳೂರು, ರಾಜ್ಯಕೌನ್ಸಿಲ್ ಸದಸ್ಯ ಹರೀಶ್ ನಾರಂಪಾಡಿ, ಎಸ್.ಸಿ.ಮೋರ್ಚಾ ಜಿಲ್ಲಾ ಅಧ್ಯಕ್ಷ ರಘು ಮಾಚಾವು ಹಾಗೂ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

