ಕಾಸರಗೋಡು: ಆಸ್ಟರ್ ಡಿ.ಎಂ ಹೆಲ್ತ್ ಕೇರ್‍ನ ಕೇರಳದ ಎಂಟನೇ ಆಸ್ಪತ್ರೆ ಕಾಸರಗೋಡು ಚೆಂಗಳದ ರಾಷ್ಟ್ರೀಯ ಹೆದ್ದಾರಿ ಅಂಚಿಗೆ ತಲೆಯೆತ್ತಿರುವ ಸುಸಜ್ಜಿತ ಕಟ್ಟಡದಲ್ಲಿ ಗುರುವಾರ ಉದ್ಘಾಟನೆಗೊಂಡಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಸ್ಪತ್ರೆ ಕಟ್ಟಡ ಉದ್ಘಾಟಿಸಿದರು. ಕರ್ನಾಟಕದ ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಸಕರಾದ ಎನ್.ಎ ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದ್ದರು.
ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್, ಜಿಲ್ಲೆಯ ಶಾಸಕರಾದ ಎ.ಕೆ.ಎಂ ಅಶ್ರಫ್, ಸಿ.ಎಚ್ ಕುಞಂಬು, ಇ.ಚಂದ್ರಶೇಖರನ್, ಎಂ. ರಾಜಗೋಪಾಲನ್, ಜಿಪಂ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಅತಿಥಿಗಳಾಗಿ ಭಾಗವಹಿಸಿದ್ದರು.
2.1ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಆಸ್ಪತ್ರೆ, 264ಹಾಸಿಗೆಗಳ ಸೌಕರ್ಯ ಹೊಂದಿದೆ. ಆಸ್ಟರ್ ಮಿಮ್ಸ್ ಆಸ್ಪತ್ರೆ ಸ್ಥಾಪಕಾಧ್ಯಕ್ಷ ಆಸಾದ್ ಮೂಪನ್, ನಿರ್ದೇಶಕ ಅನೂಪ್ ಮೂಪನ್ ಮೊದಲಾದವರು ಪಾಲ್ಗೊಂಡಿದ್ದರು.




