ಕಾಸರಗೋಡು: ಶಬರಿಮಲೆ ದೇವಸ್ಥಾನದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಚಿನ್ನ ಕೊಳ್ಳೆ ವಿರುದ್ಧ ಬಿಜೆಪಿ ರಾಜ್ಯಮಟ್ಟದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯ ಅಂಗವಾಗಿ, ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಅ. 9ರಂದು ಜರುಗಲಿದೆ. ಬೆಳಗ್ಗೆ 11ಕ್ಕೆ ನಡೆಯುವ ಪ್ರತಿಭಟನೆಯನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎ.ಪಿ. ಅಬ್ದುಲ್ಲಾಕುಟ್ಟಿ ಉದ್ಘಾಟಿಸುವರು.
ಶಬರಿಮಲೆ ದೇಗುಲದಲ್ಲಿ ಚಿನ್ನ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆಯೊಳಗೆ ಪ್ರತಿಪಕ್ಷ ಐಕ್ಯರಂಗ ಹೋರಾಟ ನಡೆಸುತ್ತದ್ದು, ಬಿಜೆಪಿ ರಾಜ್ಯ ವ್ಯಾಪಕಾಗಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.




