ಬದಿಯಡ್ಕ: ಭಾರತದಾದ್ಯಂತ ಗಾಂಧಿ ಜಯಂತಿಯಂದು ಮಹಾತ್ಮ ಗಾಂಧಿಯವರ ಗೌರವಾರ್ಥವಾಗಿ ಅವರ ಭಾರತೀಯ ಸ್ವಾತಂತ್ರ್ಯ ಚಳುವಳಿಗೆ ಅವರು ನೀಡಿದ ಅಪ್ರತಿಮ ಕೊಡುಗೆಯನ್ನು ಸ್ಮರಿಸುತ್ತಾರೆ. ಜೊತೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಭಾರತದ ಎರಡನೇ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾಗಿ, ಅವರು ಗಾಂಧೀಜಿಯವರಿಂದ ಪ್ರಭಾವಿತರಾಗಿದ್ದರು ಮತ್ತು "ಜೈ ಜವಾನ್, ಜೈ ಕಿಸಾನ್" ಎಂಬ ತಮ್ಮ ಘೋಷಣೆಯ ಮೂಲಕ ಸೈನಿಕರು ಮತ್ತು ರೈತರ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದವರು. ಇಂತಹವರನ್ನು ಸ್ಮರಿಸುವುದು ಸಮಾಜದ ಕರ್ತವ್ಯವಾಗಿದೆ. ಆ ದೃಷ್ಟಿಯಲ್ಲಿ ಡಾ ವೀರೇಂದ್ರ ಹೆಗ್ಗಡೆಯವರ ಆಶಯದಂತೆ ದೇಶದಾದ್ಯಂತ ವರ್ಷಂಪ್ರತಿ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಆಚರಿಸಲಾಗುತ್ತದೆ ಎಂದು ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಂ ಹೇಳಿದರು.
ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆ ಬದಿಯಡ್ಕ ವಲಯ ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಕಾಸರಗೋಡು ಜಂಟಿ ಆಶ್ರಯದಲ್ಲಿ ಬದಿಯಡ್ಕದ ಇರಾ ಸಭಾಭವನದಲ್ಲಿ ಗುರುವಾರ ನಡೆದ ಗಾಂಧಿ ಜಯಂತಿ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮವನ್ನು ಬದಿಯಡ್ಕ ಗ್ರಾಮ ಪಂಚಾಯತಿ ಸದಸ್ಯ ಬಾಲಕೃಷ್ಣ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ರಮನಾಥ ರೈ, ಎಂ.ಎಸ್ ಮೊಯ್ದು, ಒಕ್ಕೂಟದ ಅಧ್ಯಕ್ಷ ತಾರಾನಾಥ ರೈ, ದಯಾನಂದ ರೈ, ಹನಿಫಾ ಲೈವ್, ಗಂಗಾಧರ ಆಳ್ವ, ಪ್ರತಿಷ್ಠಾನದ ರಮೇಶ್ ಆಳ್ವ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಕವಿತಾ ಸ್ವಾಗತಿಸಿ, ಸುನಿತಾ ವಂದಿಸಿದರು.




.jpg)
