ಕೊಟ್ಟಾಯಂ: ಮಹಿಳೆಯೊಬ್ಬರನ್ನು ಕತ್ತು ಸೀಳಿ ಕೊಲೆಗೈದ ಘಟನೆ ಕೇರಳದ ಕೊಟಯಂನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಲೀನಾ ಜೋಸ್ (56) ಎಂದು ಗುರುತಿಸಲಾಗಿದೆ.
ಲೀನಾ ಅವರ ಮಗ ರಾತ್ರಿ 12.30 ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಬಂದಾಗ, ಮನೆಯ ಹಿಂದಿನ ಬಾಗಿಲಿನ ಬಳಿ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಲೀನಾ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.




