ಅಹಮದಾಬಾದ್: ಸಂಪುಟ ಪುನರ್ ರಚನೆಗೆ ಮುಂದಾಗಿರುವ ಗುಜರಾತ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹೊರತುಪಡಿಸಿ 16 ಸಚಿವರು ತಮ್ಮ ಸ್ಥಾನಗಳಿಗೆ ಗುರುವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ವಿಚಾರವನ್ನು ಬಿಜೆಪಿ ಮೂಲಗಳು ಖಚಿತಪಡಿಸಿದ್ದು, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಎಲ್ಲ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ. ಸಂಪುಟಕ್ಕೆ ಶೀಘ್ರದಲ್ಲೇ ಹೊಸಬರ ನೇಮಕವಾಗಲಿದೆ ಎಂದು ತಿಳಿಸಿವೆ.

