ಬದಿಯಡ್ಕ: ಬಿಜೆಪಿ ಬದಿಯಡ್ಕ ಪಂಚಾಯತಿ ಚುನಾವಣಾ ಸಮಿತಿ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಬದಿಯಡ್ಕ ಸಂಸ್ಕøತಿ ಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್ ಉದ್ಘಾಟಿಸಿ ಕಾರ್ಯಾಲಯದ ಮೂಲಕ ಮತದಾರರ ನಿರಂತರ ಸಂಪರ್ಕವನ್ನಿಟ್ಟುಕೊಳ್ಳಬೇಕು, ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಅಗತ್ಯವಾದ ಮಾಹಿತಿಯನ್ನು ನೀಡಬೇಕೆಂದು ಕರೆಯಿತ್ತರು.
ಪಂಚಾಯಿತಿ ಸಮಿತಿ ಅಧ್ಯಕ್ಷ ವಿಶ್ವನಾಥ ಪ್ರಭು ಕರಿಂಬಿಲ ಅಧ್ಯಕ್ಷತೆ ವಹಿಸಿದರು. ರಾಜ್ಯ ಸಮಿತಿ ಸದಸ್ಯ ರಾಮಪ್ಪ ಮಂಜೇಶ್ವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್.ಪಿ.ಆರ್, ಜಿಲ್ಲಾ ಉಪಾಧ್ಯಕ್ಷ ಡಿ.ಶಂಕರ, ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ ನಾರಂಪಾಡಿ, ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ, ರವೀಂದ್ರ ರೈ ಗೋಸಾಡ, ಬದಿಯಡ್ಕ ಪಂಚಾಯಿತಿ ಪಶ್ಚಿಮ ವಲಯ ಸಮಿತಿ ಅಧ್ಯಕ್ಷ ಮಹೇಶ್ ವಳಕುಂಜ ಉಪಸ್ಥಿತರಿದ್ದರು. ಆನಂದ ಕೆ.ಸ್ವಾಗತಿಸಿ,ಚಂದ್ರ ಮುಚ್ಚಿರಕಬೆ ವಂದಿಸಿದರು. ಅವಿನಾಶ್ ವಿ ರೈ ನಿರೂಪಿಸಿದರು.

.jpg)
