ಚೆನ್ನೈ: ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರ ಪೊಯಸ್ ಗಾರ್ಡನ್ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿತ್ತು ಎಂದು ಪೊಲೀಸರು ಶುಕ್ರವಾರ ತಿಳಿಸಿದರು.
'ಸಹಾಯಕ ಪೊಲೀಸ್ ಕಮಿಷನರ್ ಕಚೇರಿಗೆ ಇ-ಮೇಲ್ ಮೂಲಕ ಬೆದರಿಕೆ ಕರೆ ಬಂದಿತ್ತು.
ಕೂಡಲೇ ಬಾಂಬ್ ನಿಷ್ಕ್ರಿಯ ದಳವನ್ನು ಒಳಗೊಂಡ ಪೊಲೀಸರ ತಂಡವು ಉಪ ರಾಷ್ಟ್ರಪತಿ ಅವರ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿತು. ಅಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆಯಾಗಿರಬಹುದು' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

