ಪೆರ್ಲ: ಪೆರ್ಲದ ಶ್ರೀ ಶಾರದಾ ಮರಾಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀ ಶಾರದಾ ಮರಾಟಿ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಮರಾಟಿ ಬೋಡಿರ್ಂಗ್ ಹಾಲ್‍ನ 7ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಅ. 12ರಂದು ಪೆರ್ಲದ ಮರಾಟಿ ಬೋಡಿರ್ಂಗ್ ಹಾಲ್‍ನಲ್ಲಿ ಜರುಗಲಿದೆ.
ಬೆಳಗ್ಗೆ ಗಣಪತಿ ಹವನ, ಸಾಮೂಹಿಕ ಸತ್ಯನಾರಾಯಣ ಪೂಜೆ, ಭಜನೆ ಹಾಗೂ ಸಭಾ ಕಾರ್ಯಕ್ರಮ ನಡೆಯುವುದು. ಸಭಾ ಕಾರ್ಯಕ್ರಮದಲ್ಲಿ 2024-25 ವರ್ಷದ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 2024-25 ರಲ್ಲಿ ಸೇವಾ ನಿವೃತ್ತಿ ಹೊಂದಿದ ಸಂಘದ ಸದಸ್ಯ ಉದ್ಯೋಗಸ್ಥರಿಗೆ ಮತ್ತು ಮರಾಟಿ ಸಮಾಜದ ಹಿರಿಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯುವುದು. ಶಾರದಾ ಮರಾಟಿ ಚಾರಿಟೇಬಲ್ ಟ್ರಸ್ಟ್ (ರಿ)ಅಧ್ಯಕ್ಷ ಬಿ.ಜಿ.ನಾಯ್ಕ ಅಧ್ಯಕ್ಷತೆ ವಹಿಸುವರು.




