ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ರಕ್ಷಾಧಿಕಾರಿಯಾಗಿರುವ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭಾನುವಾರ ಸಂಜೆ ದೇವಾಲಯಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ವೀಕ್ಷಿಸಿ ಆಶೀರ್ವಚನವನ್ನು ನೀಡಿ ಅನುಗ್ರಹ ಮಂತ್ರಾಕ್ಷತೆಯನ್ನಿತ್ತು ಹರಸಿದರು.
ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಜಯದೇವ ಖಂಡಿಗೆ, ಕಾರ್ಯಾಧ್ಯಕ್ಷ ಜಗನ್ನಾಥ ರೈ ಪೆರಡಾಲಗುತ್ತು, ಕೋಶಾಧಿಕಾರಿ ಸೂರ್ಯನಾರಾಯಣ ಬಿ., ಆಡಳಿತ ಮಂಡಳಿ ಸದಸ್ಯ ಸೀತಾರಾಮ ನವಕಾನ, ಮಾಜಿ ಆಡಳಿತ ಮೊಕ್ತೇಸರ ಟಿ.ಕೆ.ನಾರಾಯಣ ಭಟ್, ಜೀರ್ಣೋದ್ಧಾರ ಸಮಿತಿ ಜೊತೆ ಕಾರ್ಯದರ್ಶಿ ಭಾಸ್ಕರ ಪಂಜಿತ್ತಡ್ಕ, ಗಣೇಶ ಪ್ರಸಾದ ಕಡಪ್ಪು, ಉದಯಶಂಕರ ಪಿ.ಎಸ್., ಸತೀಶ ಪುದ್ಯೋಡು, ಮಾತೃಸಮಿತಿ ಅಧ್ಯಕ್ಷೆ ವಿನಯ ಜೆ.ರೈ, ಕಾರ್ಯದರ್ಶಿ ಅನಿತಾ ಟೀಚರ್, ಕೋಶಾಧಿಕಾರಿ ಶೋಭಿತಾ ಪಂಜಿತ್ತಡ್ಕ ಮತ್ತು ಭಗವದ್ಭಕ್ತರು ಪಾಲ್ಗೊಂಡಿದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ ಜೀರ್ಣೋದ್ಧಾರ ಕಾಮಗಾರಿಗಳನ್ನು ವಿವರಿಸಿದರು.

.jpg)
