ಕಾಸರಗೋಡು: ಕೇರಳದ ವಿವಿಧ ಜಿಲ್ಲೆಗಳಿಂದ ಶಾಸಕರನ್ನು ವಿಧಾನಸಭೆಗೆ ಆರಿಸಿ ಕಳುಹಿಸುವ ಸಾಮಥ್ರ್ಯ ಬಿಜೆಪಿ ಪಕ್ಷಕ್ಕಿರುವುದಾಗಿ ರಾಜ್ಯಸಭಾ ಸಂಸದ ಸಿ. ಸದಾನಂದನ್ ಮಾಸ್ಟರ್ ತಿಳಿಸಿದ್ದಾರೆ.
ಅವರು ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಂಪೂರ್ಣ ಕಾಸರಗೋಡು ಜಿಲ್ಲಾ ಸಮಿತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಎಡ ಮತ್ತು ಐಕ್ಯರಂಗ ಬಿಜೆಪಿಯನ್ನು ದೂರವಿರಿಸಲು ಪ್ರಯತ್ನಿಸುತ್ತಾ ಬರುತ್ತಿದ್ದಾರೆ. ಇದಕ್ಕಾಘಿ ಉಭಯ ರಂಗಗಳು ಅಪವಿತ್ರ ಮೈತ್ರಿಗೆ ತಯಾರಾಗುತ್ತಿದೆ. ಉನ್ನತ ಸರ್ಕಾರಿ ಹುದ್ದೆಗಳಿಂದ ನಿವೃತ್ತರಾದವರಿಂದ ತೊಡಗಿ, ಪ್ರತಿಯೊಬ್ಬರೂ ಕೇರಳದಲ್ಲಿನ ಅಭಿವೃದ್ಧಿ ಕುಂಠಿತ ಮತ್ತು ಆರ್ಥಿಕ ಬಿಕ್ಕಟ್ಟು ನಿವಾರಿಸಲು ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಬಯಸುತ್ತಿದ್ದಾರೆ. ಜನಸಾಮಾನ್ಯರೂ ಇದನ್ನೇ ಆಗ್ರಹಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಪನೆಯಂತೆ 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ಕಾಣಲು ಪ್ರತಿಯೊಬ್ಬ ವ್ಯಕ್ತಿಯೂ ಸಕ್ರಿಯನಾಗಿರಬೇಕು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕೋಶದ ಸಂಯೋಜಕ ವಿ.ಕೆ. ಸಜೀವನ್, ರಾಷ್ಟ್ರೀಯ ಪರಿಷತ್ ಸದಸ್ಯ ಎಂ.ಸಂಜೀವ ಶೆಟ್ಟಿ, ರಾಜ್ಯ ಸಮಿತಿ ಸದಸ್ಯರಾದ ವಿ.ರವೀಂದ್ರನ್, ರವೀಶ ತಂತ್ರಿ ಕುಂಟಾರ್, ಸವಿತಾ ಟೀಚರ್, ಸತೀಶ್ಚಂದ್ರ ಭಂಡಾರಿ, ರಾಮಪ್ಪ ಮಂಜೇಶ್ವರ, ಎ.ವೇಲಾಯುಧನ್, ಕೋಯಿಕ್ಕೋಡ್ ವಲಯ ಸಮಿತಿ ಅಧ್ಯಕ್ಷ, ವಕೀಲ ಕೆ.ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್.ಸುನೀಲ್, ಎನ್.ಬಾಬುರಾಜ್, ಮನುಲಾಲ್ ಮೇಲತ್, ರಾಜ್ಯ ಸಮಿತಿ ಸದಸ್ಯರಾದ ಕೊವ್ವಲ್ ದಾಮೋದರನ್, ರೂಪವಾಣಿ ಆರ್ ಭಟ್, ಶಿವಕೃಷ್ಣ ಭಟ್, ವಕೀಲ ಬಿ.ರವೀಂದ್ರನ್, ಹರೀಶ್ಚಂದ್ರ ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಕಚೇರಿಗೆ ಆಗಮಿಸಿದ ಸಿ. ಸದಾನಂದನ್ ಮಾಸ್ಟರ್ ಅವರನ್ನು ಮುಖ್ಯ ರಸ್ತೆಯಿಂದ ಚೆಂಡೆ ಮೇಳಗಳೊಂದಿಗೆ ಬರಮಾಡಿಕೊಳ್ಳಲಾಯಿತು.


