ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡಾ ಮೇಳದ ಅವಲೋಕನ ಸಭೆ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು. ಈ ಸಂದರ್ಭ ಕ್ರೀಡಾ ಮೇಳದ ಆಮಂತ್ರಣ ಪತ್ರಿಕೆ ಮತ್ತು ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.
ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್. ಶೆಟ್ಟಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಸಂಚಾಲಕ ಡಾ. ಜಯಪ್ರಕಾಶ ನಾರಾಯಣ ಲಾಂಛನ ಬಿಡುಗಡೆ ಮಾಡಿದರು. ಮೀಂಜ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಜಯರಾಮ ಬಲ್ಲಂಗುಡೇಲು ಅಧ್ಯಕ್ಷತೆ ವಹಿಸಿದ್ದರು.
ಮೀಂಜ ಗ್ರಾಮ ಪಂಚಾಯತಿ ವಿದ್ಯಾಭ್ಯಾಸ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸರಸ್ವತಿ, ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು, ಪಂಚಾಯತಿ ಸದಸ್ಯರಾದ ರುಕಿಯಾ ಸಿದ್ದೀಕ್, ಮಂಜೇಶ್ವರ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘದ ಕಾರ್ಯದರ್ಶಿ ಶ್ಯಾಮ ಭಟ್, ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ, ಪಿಟಿಎ ಅಧ್ಯಕ್ಷ ಇಬ್ರಾಹಿಂ ಹೊನ್ನಕಟ್ಟೆ, ವಿವಿಧ ಸಮಿತಿಗಳ ಸಂಚಾಲಕರು ಉಪಸ್ಥಿತರಿದ್ದರು. ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ರಮೇಶ್ ಕೆ.ಎನ್. ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ಮೃದುಲ ವಂದಿಸಿದರು.




.jpg)
