ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡಾಮೇಳ ಇಂದಿನಿಂದ (ಅ.7-9) ಗುರುವಾರದ ತನಕ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ ಹಾಗೂ ಶ್ರೀ ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ 9ಕ್ಕೆ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಜಾರ್ಜ್ ಕ್ರಾಸ್ತ ಧ್ವಜಾರೋಹಣ ಗೈಯುವರು. ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಿ. ಆರ್. ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಂಜೇಶ್ವರ ಪೋಲೀಸ್ ಠಾಣಾಧಿಕಾರಿ ಅನೂಪ್ ಕುಮಾರ್. ಇ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮೀಂಜ ಗ್ರಾಮ ಪಂಚಾಯತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ರುಕಿಯಾ. ಕೆ, ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಸರಸ್ವತಿ, ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು, ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯೆ ಅಶ್ವಿನಿ. ಎಂ. ಎಲ್, ಮೀಂಜ ಗ್ರಾಮ ಪಂಚಾಯತಿ ಸದಸ್ಯರಾದ ಜನಾರ್ಧನ ಪೂಜಾರಿ, ಕುಸುಮ, ಮಿಸ್ರಿಯ. ಕೆ. ವಿನೋದ. ಶ್ರೀವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಸಂಚಾಲಕ ಡಾ. ಜಯಪ್ರಕಾಶ ನಾರಾಯಣ, ಶ್ರೀ ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ಸಂಚಾಲಕಿ ರಾಜೇಶ್ವರಿ. ಎಸ್. ರಾವ್, ಮೀಯಪದವು ಫಾತಿಮ ಚರ್ಚಿನ ಧರ್ಮ ಗುರು ರೆವರೆಂಡ್ ಫಾದರ್ ಎಡ್ವಿನ್ ವಿನ್ಸೆಂಟ್ ಕೊರಿಯ, ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಪಿ.ಟಿ.ಎ ಅಧ್ಯಕ್ಷ ಇಬ್ರಾಹಿಂ ಹೊನ್ನಕಟ್ಟೆ, ಮೀಂಜ ಗ್ರಾಮ ಪಂಚಾಯತಿ ಸಿ.ಡಿ.ಎಸ್ ಅಧ್ಯಕ್ಷೆ ಶಾಲಿನಿ. ಬಿ. ಶೆಟ್ಟಿ, ಮಂಜೇಶ್ವರ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘದ ಕಾರ್ಯದರ್ಶಿ ಶಾಮ. ಭಟ್. ಯು, ಮೀಂಜ ಪಿ.ಇ.ಸಿ ಕಾರ್ಯದರ್ಶಿ ಸುರೇಶ ಬಂಗೇರ, ಮಂಜೇಶ್ವರ ಉಪಜಿಲ್ಲಾ ಕ್ರೀಡಾಮೇಳದ ಕಾರ್ಯದರ್ಶಿ ಗ್ಯಾರಿ ಗಿಲ್ಮೋರ್, ಎಸ್.ಎಂ.ಸಿ ಕಾರ್ಯದರ್ಶಿ ಹಮೀದ್ ಮೈತಾಳ್ ಶುಭಾಶಂಸನೆಗೈಯುವರು. ಅಕ್ಟೋಬರ್ 9 ರಂದು ಸಮಾರೋಪ ಸಮಾರಂಭದಲ್ಲಿ ಮೀಂಜ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಜಯರಾಮ. ಬಿ ಅಧ್ಯಕ್ಷತೆ ವಹಿಸುವರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷೆ ಶಮೀಮ ಟೀಚರ್ ಸಮಾರೋಪ ಸಮಾರಂಭವನ್ನು ಉದ್ಘಾಟಿಸುವರು. ಶಿಕ್ಷಣ ಇಲಾಖೆಯ ರಾಜ್ಯ ಯೋಜನಾಧಿಕಾರಿ ಇಬ್ರಾಹಿಂ. ಬಿ. ಮುಖ್ಯ ಅತಿಥಿಯಾಗಿ ಭಾಗವಹಿಸುವರು.




