ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 58ನೇ ಪಟ್ಟಾಭಿಷೇಕದ ವರ್ಧಂತಿ ಮಹೋತ್ಸವ ಸಂದರ್ಭ, 37 ವರುಷಗಳಿಂದ ಶ್ರೀ ಧರ್ಮಸ್ಥಳ ಮೇಳದಲ್ಲಿ ಭಾಗವತರಾಗಿ ಸೇವೆ ಸಲ್ಲಿಸುತ್ತಿರುವ, ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರಿಗೆ ಪೂಜ್ಯ ಖಾವಂದರ 58ನೇ ಪಟ್ಟಾಭಿಷೇಕದ ವಧರ್ಂತಿ ಮಹೋತ್ಸವದ ವಿಶೇಷ ವೇದಿಕೆಯಲ್ಲಿ ಸನ್ಮಾನ ಕಾರ್ಯಕ್ರಮ ಜರುಗಿತು. ಡಾ. ವೀರೇಂದ್ರ ಹೆಗ್ಗಡೆ ಅವರು ಶಾಲುಹೊದಿಸಿ, ಸ್ಮರಣಿಕೆ ನೀಡಿ ರಾಮಕೃಷ್ಣ ಮಯ್ಯ ಅವರನ್ನು ಸನ್ಮಾನಿಸಿದರು.
ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ, ಹೇಮಾವತಿ ವಿ. ಹೆಗ್ಗಡೆಯವರು, ಧರ್ಮಸ್ಥಳ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್, ಬೆಳ್ತಂಗಡಿ ಶಾಸಕ ಹರೀಶ ಪೂಂಜ ಮೊದಲಾದವರು ಉಪಸ್ಥಿತರಿದ್ದರು. ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರು ಕುಟುಂಬ ಸಮೇತರಾಗಿ ಸನ್ಮಾನ ಸ್ವೀಕರಿಸಿದರು.


