ನವದೆಹಲಿ: ಕಲೈನಾರ್ ವಿಶ್ವವಿದ್ಯಾಲಯ ಮಸೂದೆ-2025ಕ್ಕೆ ಅನುಮೋದನೆ ನೀಡದೆ ವಿಳಂಬ ಮಾಡುತ್ತಿರುವ ರಾಜ್ಯಪಾಲರ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
'ಮಸೂದೆ ಕುರಿತ ನಿರ್ಧಾರವನ್ನು ಪ್ರಕಟಿಸಲು ನಿರ್ದೇಶನ ನೀಡುವಂತೆ ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಜೊತೆಗೆ, ಸಚಿವ ಸಂಪುಟದ ಸಲಹೆಯ ಅನುಸಾರ ಮತ್ತು ಸಂವಿಧಾನದ 200ನೇ ವಿಧಿಯ ಪ್ರಕಾರ ನಡೆದುಕೊಳ್ಳುವಂತೆ ರಾಜ್ಯಪಾಲರಿಗೆ ಸೂಚಿಸುವಂತೆಯೂ ತಿಳಿಸಿದೆ.
ರಾಜ್ಯ ವಿಧಾನಸಭೆಯು ಅಂಗೀಕರಿಸಿರುವ ಮಸೂದೆಯನ್ನು ರಾಷ್ಟ್ರಪತಿಗಳ ಪರಿಶೀಲನೆಗಾಗಿ ರಾಜ್ಯಪಾಲ ಆರ್.ಎನ್.ರವಿ ಅವರು ಕಾಯ್ದಿರಿಸಿದ್ದಾರೆ.




