ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ಗೋವಿಂದರಾಜು ಎಂ. ಕಲ್ಲೂರು ಅವರ 'ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು' ಕಥಾ ಸಂಕಲನವು 2023ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ. ಪ್ರಶಸ್ತಿಯು 25 ಸಾವಿರ ರೂ. ನಗದು ಬಹುಮಾನ, ಫಲಕ, ಶಾಲು, ಹಾರ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಗೋವಿಂದರಾಜು ಎಂ ಕಲ್ಲೂರು ಅವರ 'ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು' ಪುಸ್ತಕವು ಇವರ ಮೊದಲ ಕಥಾ ಸಂಕಲನವಾಗಿದ್ದು ಎಂಟು ಕಥೆಗಳನ್ನು ಒಳಗೊಂಡಿದೆ. ಡಾ. ಯು. ಆರ್. ಅನಂತಮೂರ್ತಿ ಸಣ್ಣ ಕಥಾ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಪ್ರಶಸ್ತಿ, ವೀಚಿ ಯುವ ಸಾಹಿತ್ಯ ಪ್ರಶಸ್ತಿ ಸೇರಿ ಈ ವರೆಗೆ ಒಟ್ಟು ಆರು ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದಿದೆ.




-GOVINDA%20RAJ%20KALLUR.png)
-GOVINDA%20RAJ%20KALLUR.jpeg)
