ಬದಿಯಡ್ಕ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್ ಶಾಖೆಗಳ ಚಟುವಟಿಕೆ ನಿಯಂತ್ರಿಸಬಹುದು, ಆದರೆ ಖಾಸಗಿ ಸ್ಥಳ ಮತ್ತು ಅದರ ಕಾರ್ಯಕರ್ತರ ಮನೆಗಳಲ್ಲಿ ನಡೆಯುವುದನ್ನು ನಿಷೇಧಿಸಲು ಎಂದಿಗೂ ಸಾಧ್ಯವಿಲ್ಲ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಅವರು ಕುಂಬ್ಡಾಜೆ ಪಂಚಾಯಿತಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಆರೆಸ್ಸೆಸ್ ಈ ಹಿಂದೆಯೂ ನಿಷೇಧಕ್ಕೊಳಗಾಗಿದ್ದು, ನಂತರದ ದಿನಗಳಲ್ಲಿ ಮತ್ತಷ್ಟು ಬಲಶಾಲಿಯಾಗಿ ಸಂಘಟನೆ ಹೊರಹೊಮ್ಮಿದೆ. ಕಾಂಗ್ರೆಸ್ ಈ ಹಿಂದಿನ ಇತಿಹಾಸದಿಂದ ಪಾಠ ಕಲಿಯುತ್ತದೆ ಎಂದು ಅವರು ಹೇಳಿದರು. ಅಭಿವೃದ್ಧಿ ಕಾರ್ಯಗಳಲ್ಲಿ ಕರ್ನಾಟಕ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬೆಲೆ ಏರಿಕೆ ಮತ್ತು ಪಕ್ಷದೊಳಗಿನ ಆಂತರಿಕ ಅಧಿಕಾರ ಹೋರಾಟ ಸೇರಿದಂತೆ ವಿವಿಧ ವಿಷಯಗಳಿಂದ ಮಾಧ್ಯಮಗಳು ಮತ್ತು ಜನರ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಸತೀಶ್ ಕುಂಪಲ ತಿಳಿಸಿದ್ದಾರೆ.


