ಬದಿಯಡ್ಕ: ಶಬರಿಮಲೆಯ ಚಿನ್ನ ಕಳವು ವಿಚಾರದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ನಡೆಸುತ್ತಿರುವ ಮನೆ ಮನೆ ಸಂಪರ್ಕ ಅಭಿಯಾನದ ಭಾಗವಾಗಿ, ಬದಿಯಡ್ಕ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ, ಪ್ರಮುಖ ಸಮಾಜ ಸೇವಕ ಸಾಯಿರಾಂ ಕೃಷ್ಣ ಭಟ್ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಸಿ.ಕೆ. ಪದ್ಮನಾಭನ್ ಭಾನುವಾರ ಭೇಟಿಯಾದರು. ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ಜಿಲ್ಲಾ ಉಪಾಧ್ಯಕ್ಷ ಡಿ. ಶಂಕರ, ಬದಿಯಡ್ಕ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ, ಬದಿಯಡ್ಕ ಪಶ್ಚಿಮ ವಲಯ ಅಧ್ಯಕ್ಷ ಮಹೇಶ್ ವಳಕ್ಕುಂಜ ಸೇರಿದಂತೆ ಬಿಜೆಪಿಯ ಪ್ರಮುಖರು ಮತ್ತು ಕಾರ್ಯಕರ್ತರು ಈ ಸಂದರ್ಭದಲ್ಲಿ ಜೊತೆಗಿದ್ದರು.

.jpg)
