ಬದಿಯಡ್ಕ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶಾರದಾಪೂಜೆ ಗುರುವಾರ ಜರಗಿತು. ವಿದ್ಯಾರ್ಥಿಗಳು ಭಕ್ತಿಭಾವಗಳೊಂದಿಗೆ ಪೂಜಾಕಾರ್ಯದಲ್ಲಿ ಪಾಲ್ಗೊಂಡು ಭಜನೆ ನಡೆಸಿದರು. ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಜಯಪ್ರಕಾಶ ಪಜಿಲ, ಕಾರ್ಯದರ್ಶಿ ರಾಜಗೋಪಾಲ ಚುಳ್ಳಿಕ್ಕಾನ, ಮಧುಸೂದನ ತಿಮ್ಮಕಜೆ, ಪ್ರತೀಕ್ ಬೆಳ್ಳಿಗೆ ಶಾಲಾ ಕ್ರೀಡೋತ್ಸವದಲ್ಲಿ ವಿಜೇತರಾದ ಮಕ್ಕಳಿಗೆ ಅಭಿನಂದನಾ ಪತ್ರ ವಿತರಿಸಿದರು. ಪುರೋಹಿತರು ಪುಸ್ತಕ ಪೂಜೆ, ಮಹಾಪೂಜೆ ನಡೆಸಿಕೊಟ್ಟರು. ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಪ್ರಾರ್ಥಿಸಿದರು. ಶಾಲಾ ಅಧ್ಯಾಪಕ ವೃಂದದವರು ನೇತೃತ್ವ ವಹಿಸಿದ್ದರು. ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು, ಪಾಲಕರು ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.




.jpg)
