ಕಾಸರಗೋಡು: ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಕಾಸರಗೋಡು ಇದರ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು ಅನಿವಾಸಿ ಕನ್ನಡಿಗರ ಸಮ್ಮೇಳನ ಹೊರನಾಡ ಕನ್ನಡಿಗರ ಸಮ್ಮೇಳನದ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಅ. 9ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪುರಸ್ಕಾರ ನೀಡಲಾಗುವುದು. ಮಂಜುನಾಥ ಎಜುಕೇಷನ್ ಟ್ರಸ್ಟ್, ಹೃದಯವಾಹಿನಿ ಕರ್ನಾಟಕ, ಮಂಗಳೂರು ಹಾಗೂ ಎಸ್. ಕೆ.ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಮಂಗಳೂರು ಸಹಯೋಗದಲ್ಲಿ ಕಾರ್ಯಕ್ರಮ ನಡೆಯುವುದು.





