ಪೆರ್ಲ: ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯ್ಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ಹ್ಯುಮಾನೀಟೀಸ್ ವಿಭಾಗದ ವಿದ್ಯಾರ್ಥಿನಿ ಯೋಗಿತಾ.ಜಿ, ನಿಲೇಶ್ವರದ ಇ.ಎಂ.ಎಸ್. ಕ್ರೀಡಾಂಗಣದಲ್ಲಿ ನಡೆದ ಕಾಸರಗೋಡು ಜಿಲ್ಲಾ ಮಟ್ಟದ ಒಲಿಂಪಿಕ್ಸ್ ನಲ್ಲಿ ಸೀನಿಯರ್ ವಿಭಾಗದ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆಯ ಸಾಧನೆಗೆ ಕಾಟುಕುಕ್ಕೆ ಹೈಯ್ಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ ಸದಸ್ಯರು ಹಾಗೂ ಅಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.

-YOGITHA%20G.jpg)
