ಕಾಸರಗೋಡು: ಆದೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೋವಿಕ್ಕಾನ ಮುಪ್ಪತ್ತಿಮಾರ್ ನಿವಾಸಿ, ಎಂ. ಚೋಯಿ(73)ಅವರ ಮೃತದೇಹ ಮನೆ ಸನಿಹದ ಬಾವಿಯಲ್ಲಿ ಪತ್ತೆಯಾಗಿದೆ. ಗುರುವಾರ ರಾತ್ರಿ ಆಹಾರ ಸೇವಿಸಿ ಮಲಗಿದ್ದ ಇವರು, ಶುಕ್ರವಾರ ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದರು. ಇವರನ್ನು ಹುಡುಕಾಡುವ ಮಧ್ಯೆ, ಮನೆ ಸನಿಹದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ತೋಟಗಾರಿಕಾ ನಿಗಮದ ಮುಳಿಯಾರು ಗೇರು ತೋಟ ಕಾರ್ಮಿಕರಾಗಿ ನಿವೃತ್ತರಾಗಿದ್ದ ಇವರು ಅಸೌಖ್ಯದಿಂದ ಬಳಲುತ್ತಿದ್ದರೆನ್ನಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಆದೂರು ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

