HEALTH TIPS

ಶುಕ್ರವಾರ ತೆಲಂಗಾಣ ನೂತನ ಸಚಿವರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ಪ್ರಮಾಣವಚನ?

ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಕಾಂಗ್ರೆಸ್ ಎಂಎಲ್ ಸಿ ಮೊಹಮ್ಮದ್ ಅಜರುದ್ದೀನ್ ಅವರು ಶುಕ್ರವಾರ ತೆಲಂಗಾಣ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬೆಳವಣಿಗೆಯ ಬಗ್ಗೆ ಕೇಳಿದಾಗ ತೆಲಂಗಾಣ ಪಿಸಿಸಿ ಅಧ್ಯಕ್ಷ ಬೊಮ್ಮ ಮಹೇಶ್ ಕುಮಾರ್ ಗೌಡ್ ಅವರು, "ಅಜರುದ್ದೀನ್ ಸಚಿವರಾಗಬಹುದು. ಆದರೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ" ಎಂದಿದ್ದಾರೆ.

ಈ ಬಗ್ಗೆ ಪಕ್ಷದಿಂದ ಅಥವಾ ಮಾಜಿ ಕ್ರಿಕೆಟಿಗ-ರಾಜಕಾರಣಿ ಅಜರುದ್ದೀನ್ ಅವರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಪ್ರಸ್ತುತ ಸಚಿವ ಸಂಪುಟವು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸೇರಿದಂತೆ 15 ಸದಸ್ಯರನ್ನು ಒಳಗೊಂಡಿದೆ ಮತ್ತು ಅಲ್ಪಸಂಖ್ಯಾತರಿಗೆ ಯಾವುದೇ ಪ್ರಾತಿನಿಧ್ಯ ನೀಡಿಲ್ಲ. ಆದರೆ ಸಂಪುಟದಲ್ಲಿ ಇನ್ನೂ ಮೂರು ಸಚಿವ ಸ್ಥಾನ ಖಾಲಿ ಇವೆ.

ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರ​, ಸಚಿವ ಸಂಪುಟ ವಿಸ್ತರಣೆ ಮಾಡುವ ಕುರಿತು ಭಾರೀ ಚರ್ಚೆ ನಡೆಸುತ್ತಿದ್ದು, ಅಜರುದ್ದೀನ್ ಅವರು ಶುಕ್ರವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್​ ಮೂಲಗಳು ತಿಳಿಸಿವೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಜುಬಿಲಿ ಹಿಲ್ಸ್ ವಿಧಾನಸಭಾ ಸ್ಥಾನದಿಂದ ಸ್ಪರ್ಧಿಸಿದ್ದ ಅಜರುದ್ದೀನ್ ಸೋಲು ಅನುಭವಿಸಿದ್ದರು. ನಂತರ ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries